ಊಟಕ್ಕೆ ಸೇರುವುದು ದೊಡ್ಡ ಅಪರಾಧವೇ: ಸಿದ್ದರಾಮಯ್ಯ ಪ್ರಶ್ನೆ
Update: 2025-10-13 11:51 IST
ಬೆಂಗಳೂರು, ಅ.13: ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿ ತಮ್ಮ ಸಂಪುಟ ಸದಸ್ಯರಿಗಾಗಿ ಇಂದು ಆಯೋಜಿಸಿರುವ ಭೋಜನ ಕೂಟದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.