ಉದ್ಯಮಿ ಮನೆ ಮೇಲೆ ಐಟಿ ದಾಳಿ
Update: 2024-02-07 21:53 IST
ಬೆಂಗಳೂರು: ಉದ್ಯಮಿಯೊಬ್ಬರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ವರದಿಯಾಗಿದೆ.
ತೆರಿಗೆ ವಂಚನೆ ಆರೋಪದಡಿ ಆಂಧ್ರಪ್ರದೇಶ ಮೂಲದ ಉದ್ಯಮಿ ವಂಶಿ ಎಂಬುವರಿಗೆ ಸಂಬಂಧಿಸಿದ ಬೆಂಗಳೂರಿನ ಜಯನಗರ 8ನೆ ಹಂತದಲ್ಲಿರುವ ಮನೆ, ಜೆ.ಸಿ. ರಸ್ತೆಯ ಜೈನ್ ಹೈಟ್ಸ್ ಕಟ್ಟಡದಲ್ಲಿರುವ ಕಚೇರಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಐಟಿ ಅಧಿಕಾರಿಗಳಿಂದ ಪರಿಶೀಲನೆ ಮುಂದುವರೆದಿದೆ.
ವಂಶಿ ರಸ್ತೆ ಗುತ್ತಿಗೆದಾರರಾಗಿದ್ದಾರೆ ಎಂದು ತಿಳಿದುಬಂದಿದ್ದು, ಆದಾಯ ಮತ್ತು ವ್ಯವಹಾರದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ಮೂಲಗಳು ತಿಳಿಸಿವೆ.