‘ಕರ್ನಾಟಕ ವೈಭವ’ ಕಾರ್ಯಕ್ರಮ ಉದ್ಘಾಟಿಸಿದ ಉಪ ರಾಷ್ಟ್ರಪತಿ
Update: 2025-02-07 21:25 IST
ಹಾವೇರಿ : ಜಿಲ್ಲೆಯ ರಾಣೆಬೆನ್ನೂರಿನ ಪರಿವರ್ತನಾ ಸಂಸ್ಥೆಯು ಕೆಎಲ್‍ಇ ಸಂಸ್ಥೆಯ ರಾಜರಾಜೇಶ್ವರಿ ಮಹಿಳಾ ಮಹಾವಿದ್ಯಾಲಯದ ಆವರಣದಲ್ಲಿ ಆಯೋಜಿಸಿದ್ದ ‘ಕರ್ನಾಟಕ ವೈಭವ’ ಕಾರ್ಯಕ್ರಮವನ್ನು ಉಪರಾಷ್ಟ್ರಪತಿ ಜಗದೀಪ್ ಧನಕರ್ ಶುಕ್ರವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಉಪರಾಷ್ಟ್ರಪತಿಯವರ ಪತ್ನಿ ಡಾ.ಸುದೇಶ್ ಧನಕರ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮೀನುಗಾರಿಕೆ ಸಚಿವ ಮಂಕಾಳ ವೈದ್ಯ, ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕರ್ನಾಟಕ ವೈಭವ ಸ್ವಾಗತ ಸಮಿತಿ ಅಧ್ಯಕ್ಷ ಪ್ರೊ.ಎಸ್.ವಿ.ಹಲಸೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.