ಜ.22ರಿಂದ ಜಂಟಿ ಅಧಿವೇಶನ | ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ : ಮುಖ್ಯಮಂತ್ರಿ ಸಿದ್ದರಾಮಯ್ಯ
Update: 2026-01-20 15:40 IST
ಸಿದ್ದರಾಮಯ್ಯ
ಬೆಂಗಳೂರು : ಜ.22 ರಿಂದ 31ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜ.22 ರಿಂದ ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ(MGNREGA) ಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. ಅಧಿವೇಶನದ ನಂತರ ಆಯವ್ಯಯದ ಸಿದ್ಧತೆ ಪ್ರಾರಂಭಿಸಲಾಗುವುದು ಎಂದರು.
ನವದೆಹಲಿಗೆ ಭೇಟಿ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ವರಿಷ್ಠರು ಕರೆ ನೀಡಿದರೆ ನವದೆಹಲಿಗೆ ತೆರಳುವುದಾಗಿ ತಿಳಿಸಿದರು.
ಡಿಜಿಪಿ ರಾಮಚಂದ್ರರಾವ್ ಅವರ ಅನುಚಿತ ವರ್ತನೆ ವಿರುದ್ಧ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಅವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಿ, ಅಮಾನತ್ತುಗೊಳಿಸಲಾಗಿದೆ ಎಂದರು.