ಒಳಮೀಸಲಾತಿ ಹೋರಾಟ ಅಂತ್ಯ: ಕೆ.ಎಚ್.ಮುನಿಯಪ್ಪ
ಬೆಂಗಳೂರು : ಸುಮಾರು 40 ವರ್ಷಗಳ ಸುದೀರ್ಘವಾದ ಹೋರಾಟದ ಫಲವಾಗಿ ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಸೌಲಭ್ಯ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದ ಸರಕಾರದಿಂದ ಲಭಿಸಿದ್ದು, ಪರಸ್ಪರ ಸಹೋದರರ ನಡುವಿನ ವ್ಯಾಜ್ಯದ ರೀತಿ ಈ ಸಮಸ್ಯೆ ಬಗೆಹರಿದಿದೆ ಎಂದು ಸಮಾಜ ಕಲ್ಯಾಣ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ಶನಿವಾರ ದೇವನಹಳ್ಳಿಯ ಜಾಲಿಗೆ ಗ್ರಾಮದಲ್ಲಿ ಅಂಬೇಡ್ಕರ್ ಸೇವಾ ಸಂಘದ ವತಿಯಿಂದ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಂ ರವರ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ದಿವ್ಯ ಸಾನಿಧವನ್ನು ಪಾಲನಹಳ್ಳಿ ಮಠದ ಪೀಠಾಧ್ಯಕ್ಷ ಸಿದ್ದರಾಜು ಸ್ವಾಮೀಜಿ, ವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ರಾಜಣ್ಣ, ಡಿಸಿಸಿ ಅಧ್ಯಕ್ಷ ಪ್ರಸನ್ನ ಕುಮಾರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಜಗನ್ನಾಥ್ ಹಾಗೂ ಬಯಪಾ ಮಾಜಿ ಅಧ್ಯಕ್ಷ ಶಾಂತಕುಮಾರ್, ದೇವನಹಳ್ಳಿ ಬ್ಲಾಕ್ ಸಮಿತಿ ಅಧ್ಯಕ್ಷ ಕೆ.ಸಿ.ಮಂಜುನಾಥ್, ಜಾಲಿಗೆ ಮುನಿರಾಜು, ಬುಲ್ಲಹಳ್ಳಿ ರಾಜಪ್ಪ, ದಲಿತ ಮುಖಂಡರು ಉಪಸ್ಥಿತರಿದ್ದರು.