ಕೆ-ಸೆಟ್ ಪರೀಕ್ಷೆ ಸುಸೂತ್ರ: ಶೇ.91ರಷ್ಟು ಹಾಜರು
ಬೆಂಗಳೂರು : ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಪರೀಕ್ಷೆ 2026 ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವು ರವಿವಾರ ಸುಸೂತ್ರವಾಗಿ ನಡೆಸಿದೆ.
ಒಟ್ಟು 37 ವಿವಿಧ ವಿಷಯಗಳಿಗೆ ನಡೆದ ಕೆ-ಸೆಟ್‍ಗೆ ಅರ್ಜಿ ಸಲ್ಲಿಸಿದ್ದ 1,29,212 ಮಂದಿ ಪೈಕಿ 1,17,017(ಶೇ.91ರಷ್ಟು) ಮಂದಿ ಹಾಜರಾಗಿದ್ದರು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಒಟ್ಟು 11 ಜಿಲ್ಲೆಗಳ 326 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಕೆಇಎ ಕಚೇರಿಯಲ್ಲಿ ಸ್ಥಾಪಿಸಿದ್ದ ಕಮಾಂಡ್ ಸೆಂಟರ್ ಮೂಲಕ ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ ಇಡುವ ವ್ಯವಸ್ಥೆಯನ್ನು ಮಾಡಲಾಗಿತ್ತು ಎಂದು ಎಚ್.ಪ್ರಸನ್ನ ಹೇಳಿದ್ದಾರೆ.
ಒಎಂಆರ್ ಉತ್ತರ ಪತ್ರಿಕೆಗಳ ಸ್ಕ್ಯಾನಿಂಗ್ ಕೂಡ ಆರಂಭವಾಗಿದ್ದು ಹಂತ-ಹಂತವಾಗಿ ವೆಬ್‍ಸೈಟ್‍ಗೆ ಅಪ್‍ಲೋಡ್ ಮಾಡುವ ಕೆಲಸವನ್ನೂ ಮಾಡಲಾಗುತ್ತಿದೆ ಎಂದು ಎಚ್.ಪ್ರಸನ್ನ ತಿಳಿಸಿದ್ದಾರೆ.