ಸಾಂದರ್ಭಿಕ ಚಿತ್ರ

ಬೆಂಗಳೂರು : ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಜಿಲ್ಲಾ ಕೇಂದ್ರಗಳಲ್ಲಿ(ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ) ಧ್ವಜಾರೋಹಣ ನೆರವೇರಿಸಲು ಮುಖ್ಯಮಂತ್ರಿ ಸೂಚನೆ ಮೇರೆಗೆ ಸಚಿವರನ್ನು ನೇಮಿಸಲಾಗಿದೆ.

ತುಮಕೂರು-ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಚಿಕ್ಕಮಗಳೂರು-ಇಂಧನ ಸಚಿವ ಕೆ.ಜೆ.ಜಾರ್ಜ್, ಬೆಂಗಳೂರು ಗ್ರಾಮಾಂತರ-ಸಮಾಜ ಕಲ್ಯಾಣ ಸಚಿವ ಕೆ.ಎಚ್.ಮುನಿಯಪ್ಪ, ಕೋಲಾರ-ಅರಣ್ಯ ಸಚಿವ ರಾಮಲಿಂಗಾರೆಡ್ಡಿ, ವಿಜಯಪುರ-ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಬೆಳಗಾವಿ-ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ.

ದಕ್ಷಿಣ ಕನ್ನಡ-ಆರೋಗ್ಯ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಯು.ಟಿ.ಖಾದರ್, ಕಲಬುರಗಿ-ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಬೀದರ್-ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ, ಯಾದಗಿರಿ-ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಗದಗ-ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಮಂಡ್ಯ-ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ, ಚಿಕ್ಕಬಳ್ಳಾಪುರ-ಸಾರಿಗೆ ಸಚಿವ ಬಿ.ಎಸ್.ಸುರೇಶ್.

ಮೈಸೂರು-ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ, ಧಾರವಾಡ-ಕಾರ್ಮಿಕ ಸಚಿವ ಸಂತೋಷ್ ಲಾಡ್, ಕೊಪ್ಪಳ-ಕನ್ನಡ ಮತ್ತು ಸಂಸ್ಕøತಿ ಸಚಿವ ಶಿವರಾಜ್ ತಂಗಡಗಿ, ದಾವಣಗೆರೆ-ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಚಾಮರಾಜನಗರ-ಪಶುಸಂಗೋಪನೆ ಸಚಿವ ಸಿ.ಪುಟ್ಟರಂಗ ಶೆಟ್ಟಿ, ಶಿವಮೊಗ್ಗ-ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ.

ಹಾವೇರಿ-ಜವಳಿ ಸಚಿವ ರುದ್ರಪ್ಪ ಲಮಾಣಿ, ಬಳ್ಳಾರಿ- ವಸತಿ ಸಚಿವ ಝಮೀರ್ ಅಹ್ಮದ್ ಖಾನ್, ಉತ್ತರ ಕನ್ನಡ-ಸಹಕಾರ ಸಚಿವ ಲಕ್ಷ್ಮಣ ಸವದಿ, ಕೊಡಗು-ಕೃಷಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ, ಹಾಸನ-ಅಬಕಾರಿ ಸಚಿವ ಕೆ.ಎಂ.ಶಿವಲಿಂಗೇಗೌಡ, ಬಾಗಲಕೋಟೆ-ಸಣ್ಣ ಕೈಗಾರಿಕೆ ಸಚಿವ ವಿಜಯಾನಂದ ಕಾಶಪ್ಪನವರ್, ಬೆಂಗಳೂರು ದಕ್ಷಿಣ-ಪೌರಾಡಳಿತ ಸಚಿವ ಎಚ್.ಸಿ.ಬಾಲಕೃಷ್ಣ.

ರಾಯಚೂರು-ಸಣ್ಣ ನೀರಾವರಿ ಸಚಿವ ಡಾ.ಅಜಯ್ ಸಿಂಗ್, ಉಡುಪಿ-ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಝ್ವಾನ್ ಅರ್ಶದ್, ಚಿತ್ರದುರ್ಗ-ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಟಿ.ರಘುಮೂರ್ತಿ ಹಾಗೂ ವಿಜಯನಗರ-ಮೀನುಗಾರಿಕೆ, ಬಂದರು ಸಚಿವ ಕೆ.ಎಸ್.ಬಸವಂತಪ್ಪ ಅವರನ್ನು ನೇಮಿಸಲಾಗಿದೆ.

ಅನಾರೋಗ್ಯ ಅಥವಾ ಇತರೆ ಕಾರಣಗಳಿಂದಾಗಿ ಸಚಿವರು ಧ್ವಜಾರೋಹರಣ ಕಾರ್ಯಕ್ರಮಕ್ಕೆ ಅನುಪಸ್ಥಿತರಿದ್ದಲ್ಲಿ, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ತಿಳಿಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor