Bengaluru | ಡಿ.ಪಿ.ಎನ್. ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ
ಬೆಂಗಳೂರು : ನಗರದ ಡಿ.ಪಿ.ಎನ್. ಕಾಲೇಜಿನಲ್ಲಿ ಶನಿವಾರ (ನ.7) ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಖ್ಯಾತ ಗಾಯಕ ಹಾಗೂ ನಟರಾದ ಶಶಿಧರ್ ಕೋಟೆ ಅವರು ಆಗಮಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಅಧ್ಯಕ್ಷರಾದ ಡಾ. ಗೋಪಾಲಕೃಷ್ಣ ಅವರು ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸವಿತಾ ಬಸವಯ್ಯ ಅವರು ಉಪಸ್ಥಿತರಿದ್ದು, ಕನ್ನಡ ರಾಜ್ಯೋತ್ಸವದ ಮಹತ್ವದ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಕನ್ನಡ ನಾಡು, ನುಡಿ, ಭಾಷೆ ಮತ್ತು ಸಂಸ್ಕೃತಿಯ ಮೇಲಿನ ಅಭಿಮಾನವನ್ನು ಸಾರಲಾಯಿತು. ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಉತ್ಸಾಹದಿಂದ ಭಾಗವಹಿಸಿ ಕನ್ನಡ ರಾಜ್ಯೋತ್ಸವದ ಸಂಭ್ರಮವನ್ನು ಹೆಚ್ಚಿಸಿದರು.