ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ಹೆಚ್ಚುವರಿ 50 ರೂ.ಗಳನ್ನು ಪಾವತಿಸಲು 300 ಕೋಟಿ ರೂ. ಮೀಸಲು
ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು : ರೈತರ ಹಿತದೃಷ್ಟಿಯನ್ನು ಕಾಪಾಡುವ ನಿಟ್ಟಿನಲ್ಲಿ ಒಂದು ಬಾರಿಯ ಕ್ರಮವಾಗಿ ಆರ್ಥಿಕ ನೆರವು ನೀಡಲು ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ಹೆಚ್ಚುವರಿಯಾಗಿ 50 ರೂ.ಗಳನ್ನು ಪಾವತಿಸಲು 300 ಕೋಟಿ ರೂ. ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಶುಕ್ರವಾರ ವಿಧಾನಸಭೆಯಲ್ಲಿ 2026-27ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಕರ್ನಾಟಕ ತೈಲ ಮಾರುಕಟ್ಟೆ ಕಂಪೆನಿಗಳಿಗೆ ನಿಗದಿಪಡಿಸಲಾದ ಎಥೆನಾಲ್ ಖರೀದಿ ಪ್ರಮಾಣವು ರಾಜ್ಯದ ಉತ್ಪಾದನಾ ಸಾಮಥ್ರ್ಯಕ್ಕಿಂತ ಕಡಿಮೆಯಾಗಿರುವುದಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದರೂ ಪರಿಗಣನೆಯಾಗದೇ ಇರುವುದರಿಂದ, ನಮ್ಮ ರೈತರು ಮಾರುಕಟ್ಟೆ ಏರಿಳಿತಗಳು ಮತ್ತು ಬೆಲೆ ಅನಿಶ್ಚಿತತೆಗೆ ಒಳಗಾಗಿರುತ್ತಾರೆ. ಆದುದರಿಂದ ರಾಜ್ಯ ಸರಕಾರದ ಕೋಟಾವನ್ನು ಹೆಚ್ಚಿಸಲು ಕೇಂದ್ರ ಸರಕಾರಕ್ಕೆ ಒತ್ತಾಯ ಮಾಡಲಾಗುವುದು ಎಂದರು.
ಜಿಲ್ಲಾ ಮಟ್ಟದಲ್ಲಿ ಕಾರ್ಖಾನೆವಾರು ಪ್ರತ್ಯೇಕ ತಂಡಗಳ ಮುಖಾಂತರ 2025-26ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನಲ್ಲಿ ಕನಿಷ್ಟ ತಿಂಗಳಿಗೆ ಎರಡು ಬಾರಿ ಸಕ್ಕರೆ ಇಳುವರಿಯನ್ನು ಪರಿಶೀಲಿಸಲು ಕ್ರಮ ಕೈಗೊಳ್ಳಲಾಗಿದೆ. ‘ಪಿಎಂ ಮಿತ್ರ ಮೆಗಾ ಜವಳಿ ಪಾರ್ಕ್’ನಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ರಾಜ್ಯ ಸರಕಾರವು 390 ಕೋಟಿ ರೂ.ಗಳನ್ನು ಅನುಮೋದಿಸಿದ್ದು, ಈ ಯೋಜನೆಗಾಗಿ 2026-27ನೇ ಸಾಲಿಗೆ 75 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.
ಮುಖ್ಯಾಂಶಗಳು:
► ನೇಕಾರರ ಸಮ್ಮಾನ್ ಯೋಜನೆಯಡಿ ಒಟ್ಟು 1.30 ಲಕ್ಷ ನೇಕಾರರಿಗೆ ವಾರ್ಷಿಕ 5 ಸಾವಿರ ರೂ.ಗಳ ಆರ್ಥಿಕ ನೆರವು.
► ವಿದ್ಯುತ್ ಸಹಾಯಧನ ಯೋಜನೆಯಡಿ 1 ರಿಂದ 10 ಎಚ್‍ಪಿ ವರೆಗೆ ಉಚಿತವಾಗಿ ಮತ್ತು 10 ರಿಂದ 20 ಎಚ್‍ಪಿ ವರೆಗಿನ ಘಟಕಗಳಿಗೆ ರಿಯಾಯಿತಿ ದರದಲ್ಲಿ ವಿದ್ಯುತ್ ಒದಗಿಸುವುದು.
► ಎಸ್‍ಸಿ, ಎಸ್‍ಟಿಗಳಿಗೆ 20 ಎಚ್‍ಪಿಯಿಂದ 200 ಎಚ್‍ಪಿ ವರೆಗಿನ ವಿದ್ಯುತ್ ಮಗ್ಗ ನೇಕಾರರಿಗೆ ಪ್ರತಿ ಯೂನಿಟ್‍ಗೆ ಶೇ.50ರಷ್ಟು ಸಹಾಯಧನ ನೀಡುವ ಯೋಜನೆ.
► ನೇಕಾರರ ಏಳಿಗೆಗಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟಾರೆಯಾಗಿ 225 ಕೋಟಿ ರೂ. ಅನುದಾನವ.
► ರಾಜ್ಯದಲ್ಲಿರುವ ಸಹಕಾರಿ ನೂಲಿನ ಗಿರಣಿಗಳನ್ನು ಪ್ರೋ ತ್ಸಾಹಿಸಲು ಪ್ರತಿ ಯೂನಿಟ್‍ಗೆ 3 ರೂ. ರಂತೆ ವಿದ್ಯುತ್ ಸಹಾಯಧನ.