×
Ad

ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮೃತ್ಯು: ಸಿದ್ದರಾಮಯ್ಯ, ಡಿಕೆಶಿ ಸಂತಾಪ

Update: 2026-01-28 11:14 IST

ಅಜಿತ್‌ ಪವಾರ್‌ (PTI)

ಬೆಂಗಳೂರು: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ನಿಧನರಾದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಅವರ ಅಗಲಿಕೆ ಸಾರ್ವಜನಿಕ ಜೀವನಕ್ಕೆ ತುಂಬಲಾರದ ನಷ್ಟ ಎಂದು ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಪ್ರೀತಿಪಾತ್ರರಿಗೆ ಈ ಭರಿಸಲಾಗದ ದುಃಖವನ್ನು ಸಹಿಸುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಡಿಸಿಎಂ:

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ದುರದೃಷ್ಟಕರ ವಿಮಾನ ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದ ಸುದ್ದಿ ಕೇಳಿ ಆಘಾತ ಮತ್ತು ತೀವ್ರ ದುಃಖವಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಂಬನಿ ಮಿಡಿದಿದ್ದಾರೆ.

ಅವರ ಅಕಾಲಿಕ ಅಗಲುವಿಕೆ ಸಾರ್ವಜನಿಕ ಜೀವನಕ್ಕೆ ಮತ್ತು ಮಹಾರಾಷ್ಟ್ರದ ರಾಜಕಾರಣಕ್ಕೆ ದೊಡ್ಡ ನಷ್ಟವಾಗಿದೆ.

ಮೃತರ ಕುಟುಂಬಸ್ಥರಿಗೆ ಮತ್ತು ಬೆಂಬಲಿಗರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಈ ದುಃಖದ ಸಮಯದಲ್ಲಿ ಅವರಿಗೆ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News