ಬೆಂಗಳೂರು, ಅ.27: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಅಂತಿಮ ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ತನ್ನ ಅಧಿಕೃತ ವೆಬ್ ಸೈಟ್ https://ceo.karnataka.gov.in/enನಲ್ಲಿ ಪ್ರಕಟಿಸಿದೆ.

ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆಯಡಿ ಕರಡು ಮತದಾರರ ಪಟ್ಟಿ ಪ್ರಕಟಿಸಿ, ಹಕ್ಕು ಮತ್ತು ಆಕ್ಷೇಪಣೆಗಳ ಸಲ್ಲಿಕೆ ಹಾಗೂ ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಅಂತಿಮ ಪಟ್ಟಿಯನ್ನು ಚುನಾವಣಾ ಆಯೋಗವು ಬಿಡುಗಡೆ ಮಾಡಿದೆ.

ಮತದಾರರು ಅಂತಿಮ ಪಟ್ಟಿಯಲ್ಲಿ ತಮ್ಮ ಹೆಸರು ಮತ್ತು ಇತರ ವಿವರಗಳನ್ನು ಪರಿಶೀಲಿಸಿಕೊಳ್ಳಬಹುದು. ಹೆಸರು ಕೈಬಿಟ್ಟಿರುವ ಅಥವಾ ವಿವರಗಳಲ್ಲಿ ವ್ಯತ್ಯಾಸ ಕಂಡುಬಂದಿರುವ ಮತದಾರರು ಸಂಬಂಧಪಟ್ಟ ಚುನಾವಣಾಧಿಕಾರಿಗಳನ್ನು ಸಂಪರ್ಕಿಸಿ ಮುಂದಿನ ಕ್ರಮದ ಕುರಿತು ಮಾಹಿತಿ ಪಡೆಯಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor