ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ 2026-27ನೇ ಸಾಲಿನ ಗೆಜೆಟೆಡ್ ಪ್ರೊ ಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ(ಕೆಎಎಸ್) ನೇಮಕಾತಿಗೆ ಪೂರ್ವಭಾವಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ನ.15ರಂದು ಬೆಂಗಳೂರಿನ 63 ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.

ಶನಿವಾರ ಈ ಸಂಬಂಧ ಬೆಂಗಳೂರು ನಗರ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ದೃಷ್ಟಿಯಿಂದ, ಬೆಳಿಗ್ಗೆ 7 ಗಂಟೆಯಿಂದ ಪರೀಕ್ಷೆ ಮುಕ್ತಾಯಗೊಳ್ಳುವವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ ಎಂದಿದ್ದಾರೆ.

ಹೀಗಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಫೋನ್, ಪೇಜರ್, ಬ್ಲೂಟೂತ್, ವೈರ್‍ಲೆಸ್ ಸೆಟ್‍ಗಳು ಇತ್ಯಾದಿ ಎಲೆಕ್ಟ್ರಾನಿಕ್ ವಸ್ತುಗಳು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ. ಹಾಗೆಯೇ ನಿಷೇಧಿತ ಪ್ರದೇಶದಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಪ್ರತಿಬಂಧಕಾಜ್ಞೆಯನ್ನು ವಿಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor