×
Ad

ಕಾವೇರಿ ತೀರದಲ್ಲಿ ಅಸ್ಥಿ ವಿಸರ್ಜನೆಗೆ ನಿರ್ಬಂಧ ಕೋರಿ ಅರ್ಜಿ : ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

Update: 2024-07-29 22:57 IST

ಬೆಂಗಳೂರು: ಕಾವೇರಿ ನದಿ ದಂಡೆಯಲ್ಲಿ ಆಸ್ಥಿ ವಿಸರ್ಜನೆ ಸೇರಿದಂತೆ ಇತರ ಮಾಲಿನ್ಯಕಾರಕ ಚಟುವಟಿಕೆಗಳಿಗೆ ನಿರ್ಬಂಧ ಹೇರುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಬೆಂಗಳೂರು ನಿವಾಸಿ ವಕೀಲ ಕುಶಾಲ್ ಕುಮಾರ್ ಕೌಶಿಕ್ ಸೇರಿ ಆರು ಮಂದಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ. ಕೆ.ವಿ.ಅರವಿಂದ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರಕಾರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಡ್ಯ ಜಿಲ್ಲಾಧಿಕಾರಿ, ಮಂಡ್ಯ ಉಪ ವಿಭಾಗಾಧಿಕಾರಿ, ಶ್ರೀರಂಗಪಟ್ಟಣ ತಹಶೀಲ್ದಾರ್, ಶ್ರೀರಂಗಪಟ್ಟಣ ನಗರಸಭೆಗೆ ನೋಟಿಸ್ ಜಾರಿಗೊಳಿಸಿತು. ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಲ್ಲಾ ಪ್ರತಿವಾದಿಗಳಿಗೆ ಸೂಚಿಸಿ ವಿಚಾರಣೆಯನ್ನು ಸೆ.11ಕ್ಕೆ ಮುಂದೂಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News