×
Ad

ಡಿಸಿಇಟಿ ಮಾಹಿತಿ ಬದಲಾವಣೆಗೆ ಅವಕಾಶ : ಕೆಇಎ

Update: 2025-06-05 23:32 IST

ಬೆಂಗಳೂರು : ಡಿಸಿಇಟಿ-2025ಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಅರ್ಜಿಗಳಲ್ಲಿನ ಮಾಹಿತಿಯನ್ನು ಅರ್ಹತೆಗೆ ಅನುಗುಣವಾಗಿ ಮಾರ್ಪಡಿಸಲು ಜೂ.5ರ ಸಂಜೆ 4ರಿಂದ ಜೂ.8ರ ರಾತ್ರಿ 11:59ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

ಅಭ್ಯರ್ಥಿಗಳು ಅಗತ್ಯವಿದ್ದಲ್ಲಿ ತಾವು ಆನ್‍ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ ದಾಖಲಿಸಿರುವ ವಿವರಗಳನ್ನು ಮಾರ್ಪಡಿಸಿಕೊಳ್ಳುವ ಮೊದಲು ಅರ್ಜಿಯಲ್ಲಿ ಮುದ್ರಿತವಾಗಿರುವ ಮಾಹಿತಿಯನ್ನು ಕೂಲಂಕುಶವಾಗಿ ಪರಿಶೀಲಿಸಿ ನಂತರ ಬದಲಾಯಿಸಬೇಕು.

ಬದಲಾಯಿಸಿಕೊಂಡ ನಂತರ ತಪ್ಪದೇ ಅರ್ಜಿಯನ್ನು ಮುದ್ರಿಸಿ ತಮ್ಮಲ್ಲಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು. ತಪ್ಪಿದಲ್ಲಿ ಅಭ್ಯರ್ಥಿಗಳು ಅರ್ಜಿಯಲ್ಲಿ ಮೊದಲು ಸಲ್ಲಿಸಿದ ಮಾಹಿತಿಯನ್ನೇ ಮುಂದಿನ ಎಲ್ಲಾ ಪ್ರಕ್ರಿಯೆಗೆ ಪರಿಗಣಿಸಲಾಗುವುದು.

ಅಭ್ಯರ್ಥಿಯ ಹೆಸರು, ತಾಯಿ ಹಾಗೂ ತಂದೆಯ ಹೆಸರು, ಜನ್ಮ ದಿನಾಂಕ, ಲಿಂಗ, ಮೊಬೈಲ್ ಸಂಖ್ಯೆ, ಇ-ಮೇಲ್ ವಿಳಾಸ, ರಾಷ್ಟ್ರೀಯತೆ - ಈ ವಿವರಗಳನ್ನು ತಿದ್ದುಪಡಿ ಅಥವಾ ಬದಲಾವಣೆ ಮಾಡಿಕೊಳ್ಳಲು ಅವಕಾಶ ನೀಡಿರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟನೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News