×
Ad

ಪಿಜಿ ವೈದ್ಯಕೀಯ: ಸೇವಾ ನಿರತರಿಗೆ ನ.16ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ

Update: 2025-11-14 20:56 IST

ಬೆಂಗಳೂರು : 2025ನೆ ಸಾಲಿನ ಎಂಡಿ ಮತ್ತು ಎಂಎಸ್ ಕೋರ್ಸುಗಳಿಗೆ ನೋಂದಣಿ ಮಾಡಲು ಅರ್ಹ ಸೇವಾನಿರತ ಅಭ್ಯರ್ಥಿಗಳಿಗೆ ಆನ್ ಲೈನ್ ಪೋರ್ಟಲ್ ತೆರೆಯಲಾಗಿದ್ದು, ಆನ್‍ಲೈನ್ ಮೂಲಕ ನೋಂದಾಯಿಸಿಕೊಂಡು ನ.16ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.

ಶುಕ್ರವಾರ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪ್ರಕಟಣೆ ಹೊರಡಿಸಿರುವ ಅವರು, ಪಿಜಿನೀಟ್ - 2025ರಲ್ಲಿ ನಿಗದಿಪಡಿಸಿರುವ ಕನಿಷ್ಠ ಪರ್ಸಂಟೈಲ್‌ ಅಂಕಗಳನ್ನು ಅಥವಾ ಅದಕ್ಕಿಂತ ಹೆಚ್ಚು ಪರ್ಸಂಟೈಲ್‌ ಅಂಕಗಳನ್ನು ಪಡೆದಿರುವ ಅಭ್ಯರ್ಥಿಗಳು ಮಾತ್ರ ನೋಂದಣಿ ಮಾಡಿಕೊಳ್ಳಲು ಅರ್ಹರಿರುತ್ತಾರೆ ಎಂದು ಸ್ಪಷ್ಪಪಡಿಸಿದ್ದಾರೆ.

ನೋಂದಣಿ ಶುಲ್ಕ, ದಾಖಲಾತಿ ಪರಿಶೀಲನೆಯ ವಿವರಗಳು, ದಾಖಲಾತಿ ಪರಿಶೀಲನೆಗೆ ಸಲ್ಲಿಸಬೇಕಾದ ಮೂಲ ದಾಖಲಾತಿಗಳು, ಇತರ ವಿವರಗಳನ್ನು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ದಾಖಲೆಗಳ ಪರಿಶೀಲನೆಗೆ ನ.17ರಂದು(ಬೆ.11ರಿಂದ ಮ.2) ಇಲ್ಲಿನ ಮಲ್ಲೇಶ್ವರದಲ್ಲಿರುವ ಕೆಇಎ ಕಚೇರಿಗೆ ಸಂಬಂಧಿಸಿದ ಎಲ್ಲ ಮೂಲ ದಾಖಲೆಗಳೊಂದಿಗೆ ಹಾಜರಾಗಬೇಕು ಎಂದು ಅವರು ಸೂಚಿಸಿದ್ದಾರೆ.

ಪಿಜಿಸಿಇಟಿ: ಶುಲ್ಕ ಪಾವತಿಗೆ ನ.15ರವರೆಗೆ ದಿನಾಂಕ ವಿಸ್ತರಣೆ: ಎಂಬಿಎ, ಎಂಸಿಎ, ಎಂಇ, ಎಂಟೆಕ್ ಮತ್ತು ಎಂ.ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೂರನೇ ಹಾಗೂ ಅಂತಿಮ ಸುತ್ತಿನಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿ ಹಾಗೂ ಸೀಟು ಖಾತರಿ ಚೀಟಿ ಡೌನ್‍ಲೋಡ್ ಮಾಡಿಕೊಳ್ಳಲು ನ.15ರಂದು ಮಧ್ಯಾಹ್ನ 3 ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದೆ. ಅದೇ ದಿನ ಸಂಜೆ 5.30ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News