×
Ad

ಕೆಇಎ: 973 ಹುದ್ದೆ ನೇಮಕಾತಿಗೆ ಡಿ.20ರಿಂದ ಲಿಖಿತ ಪರೀಕ್ಷೆ

Update: 2025-11-20 23:34 IST

ಬೆಂಗಳೂರು : ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ವಿವಿಧ ಇಲಾಖೆ/ನಿಗಮಗಳಲ್ಲಿನ 973 ಖಾಲಿ ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಡಿ.20ರಿಂದ ಪರೀಕ್ಷೆಗಳು ನಡೆಯಲಿವೆ.

ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪ್ರಕಟನೆ ಹೊರಡಿಸಿದ್ದು, ಕಲ್ಯಾಣ ಕರ್ನಾಟಕ ಕೋಟಾ ಕ್ಲೇಮ್ ಮಾಡಿರುವ ಅಭ್ಯರ್ಥಿಗಳಿಗೆ ಡಿ.20, ಡಿ.21, ಜನವರಿ 24 ಮತ್ತು ಫೆಬ್ರುವರಿ 22ರಂದು ಪರೀಕ್ಷೆಗಳು ನಡೆಯಲಿವೆ. ಇದರಲ್ಲಿ 391 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಹೈದರಾಬಾದ್ ಕರ್ನಾಟಕ ಕೋಟಾ ಕ್ಲೇಮ್ ಮಾಡದವರಿಗೆ ಜ.10, ಜ.11, ಜ.12 ಮತ್ತು ಜ.25ರಂದು ವಿವಿಧ ಪರೀಕ್ಷೆಗಳು ನಡೆಯಲಿವೆ. ಇದರಲ್ಲಿ 582 ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಗಳಲ್ಲಿ ಋಣಾತ್ಮಕ ಮೌಲ್ಯಮಾಪನ ಇರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ 1/4 ಅಂಕ ಕಡಿತ ಮಾಡಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.

ತಾಂತ್ರಿಕ ಶಿಕ್ಷಣ, ಕೃಷಿ ಮಾರಾಟ, ಬಿಡಿಎ, ಬೆಂಗಳೂರು ಜಲಮಂಡಳಿ, ಕೆಎಸ್‍ಡಿಎಲ್, ಕೆಕೆಆರ್ ಟಿಸಿ, ಆರ್ ಜಿಯುಎಚ್‍ಎಸ್, ಕೆಎಸ್‍ಎಸ್‍ಐಡಿಸಿ, ಶಾಲಾ ಶಿಕ್ಷಣ ಇತ್ಯಾದಿ ಇಲಾಖೆ/ನಿಗಮ- ಮಂಡಳಿಗಳ ವಿವಿಧ ದರ್ಜೆಯ ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News