ಯುಜಿಸಿಇಟಿ | ಮೊದಲ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ : ಕೆಇಎ
Update: 2026-07-14 19:28 IST
ಬೆಂಗಳೂರು : ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.
ಈ ಕುರಿತು ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಕಟನೆ ನೀಡಿದ್ದು, ನಿರೀಕ್ಷೆ ಪ್ರಕಾರ ಜು.14ರಂದು ಪ್ರಕಟಿಸಬೇಕಿತ್ತು. ಆದರೆ ನಿಗದಿತ ಸಮಯಕ್ಕಿಂತ ಮೊದಲೇ ಫಲಿತಾಂಶ ಹೊರಬಿದ್ದಿದೆ ಎಂದು ತಿಳಿಸಿದ್ದಾರೆ.
ತಾತ್ಕಾಲಿಕ ಫಲಿತಾಂಶಕ್ಕೆ ಆಕ್ಷೇಪಣೆ ಇದ್ದಲ್ಲಿ ಜು.14ರಂದು ಸಂಜೆ 5ಗಂಟೆಯೊಳಗೆ ಆನ್ಲೈನ್ ಮೂಲಕ ಸಲ್ಲಿಸಬಹುದು. ಜು.9ರಂದು ಬೆಳಗ್ಗೆ 11ಗಂಟೆವರೆಗೆ ದಾಖಲಿಸಿದ್ದ ಇಚ್ಛೆ-ಆಯ್ಕೆಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.