ಬೆಂಗಳೂರು : ಉಳಿಕೆ ಮೂಲ ವೃಂದದ ಇಎಸ್‍ಐ ನರ್ಸಿಂಗ್‌ ಅಧಿಕಾರಿ, ಫಾರ್ಮಸಿ ಅಧಿಕಾರಿ, ವಸತಿ ಶಾಲೆಗಳ ಶಿಕ್ಷಕರ ಹುದ್ದೆಗಳಿಗೆ ಸೋಮವಾರ ಸುಸೂತ್ರವಾಗಿ ಲಿಖಿತ ಪರೀಕ್ಷೆ ನಡೆಸಲಾಯಿತು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಳಗಿನ ಸಾಮಾನ್ಯ ಜ್ಞಾನ ಪತ್ರಿಕೆಯ ಪರೀಕ್ಷೆಯನ್ನು 48,767 ಅಭ್ಯರ್ಥಿಗಳ ಪೈಕಿ 33,603 (ಶೇ.69) ಮಂದಿ ಬರೆದರು. ಮಧ್ಯಾಹ್ನದ ನಿರ್ದಿಷ್ಟ ಪತ್ರಿಕೆಯನ್ನು 19,987 ಮಂದಿ ಪೈಕಿ 15,777 (ಶೇ.79) ಮಂದಿ ಬರೆದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಬೆಂಗಳೂರು ಸೇರಿದಂತೆ ಬಳ್ಳಾರಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ, ಧಾರವಾಡ ಮತ್ತು ದಾವಣಗೆರೆ ಜಿಲ್ಲೆಗಳ ಒಟ್ಟು 119 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಪರೀಕ್ಷೆ ಮುಗಿದ ಕೂಡಲೇ ಒಎಂಆರ್ ಪ್ರತಿಗಳನ್ನು ಸ್ಕ್ಯಾನ್ ಮಾಡಿ ಕೆಇಎ ವೆಬ್‍ಸೈಟ್‍ನಲ್ಲಿ ಅಪ್‍ಲೋಡ್ ಮಾಡಲಾಯಿತು ಎಂದು ಅವರು ವಿವರಿಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor