ಸಿದ್ದರಾಮಯ್ಯ, ಡಿಕೆಶಿಯವರನ್ನು ಭೇಟಿಯಾದ ಕಿರಣ್ ಮಜುಂದಾರ್ ಶಾ
Update: 2025-10-21 13:55 IST
ಬೆಂಗಳೂರು: ಬೆಂಗಳೂರು ನಗರದಲ್ಲಿನ ರಸ್ತೆ ಗುಂಡಿಗಳು ಹಾಗೂ ಕಸದ ಸಮಸ್ಯೆಯ ಕುರಿತು ಧ್ವನಿಯೆತ್ತಿದ್ದ ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಡಿ.ಕೆ.ಶಿವಕುಮಾರ್, ‘ಇಂದು ನನ್ನ ನಿವಾಸದಲ್ಲಿ ಉದ್ಯಮಿ ಮತ್ತು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ಅವರನ್ನು ಭೇಟಿಯಾಗಿದ್ದು ಸಂತೋಷವಾಯಿತು. ಬೆಂಗಳೂರಿನ ಅಭಿವೃದ್ಧಿ, ನಾವೀನ್ಯತೆ ಮತ್ತು ಕರ್ನಾಟಕದ ಬೆಳವಣಿಗೆಯ ಮುಂದಿನ ಹಾದಿಯ ಕುರಿತು ನಾವು ಚರ್ಚಿಸಿದೆವು’ ಎಂದು ಹೇಳಿದ್ದಾರೆ.
ಕಿರಣ್ ಮಜುಂದಾರ್ ಶಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನೂ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿದ್ದರು.