ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ವಿರುದ್ಧ ಎಫ್‌ಐಆರ್ ದಾಖಲು

Update: 2026-08-10 00:56 IST

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್‌ಸಿ) ಸದಸ್ಯೆ ಶಾಂತಾ ಹೊಸಮನಿ ಮತ್ತು ಕೆಎಎಸ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಕಲಬುರಗಿ ಮೂಲದ ಅಭ್ಯರ್ಥಿ ಮಮಿತಾ ಅವರ ವಿರುದ್ಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಕರ್ನಾಟಕ ಆಡಳಿತ ಸೇವೆ (ಕೆಎಎಸ್) ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಭ್ಯರ್ಥಿ ಮಮಿತಾ ಅವರು ಹುದ್ದೆ ಪಡೆದುಕೊಳ್ಳಲು ಕೆಪಿಎಸ್‌ಸಿ ಸದಸ್ಯರನ್ನು ಸಂಪರ್ಕಿಸಿದ್ದಾರೆ ಎಂದು ಆರೋಪಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಕಾಂತಕುಮಾರ್ ಅವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದರು. ದೂರನ್ನು ಆಧರಿಸಿ ಕೆಪಿಎಸ್‌ಸಿಯಿಂದ ದಾಖಲಾತಿಗಳನ್ನು ಪಡೆದು ಪ್ರಾಥಮಿಕ ವಿಚಾರಣೆ ನಡೆಸಿದಾಗ, ಗಂಭೀರ ಸ್ವರೂಪದ ಅಪರಾಧ ಕಂಡುಬಂದಿರುವುದರಿಂದ ಎಫ್‌ಐಆರ್‌ ದಾಖಲಿಸಲಾಗಿದೆ.

ʼಕೆಎಎಸ್‌ ಹುದ್ದೆ ಗಿಟ್ಟಿಸಿಕೊಳ್ಳಲು ಅಕ್ರಮವಾಗಿ ಹಣ ನೀಡಲು‌ ಅಭ್ಯರ್ಥಿ ಮಮಿತಾ ಮುಂದಾಗಿದ್ದಾರೆ. ಸಂದರ್ಶನ ಎದುರಿಸಿರುವ ಮಮಿತಾ, ಫಲಿತಾಂಶದ ನಿರೀಕ್ಷೆಯಲ್ಲಿ ಇದ್ದಾರೆ. ಈ ಅಕ್ರಮ ವ್ಯವಹಾರಕ್ಕೆ ಮಮಿತಾ ಅವರು ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿಯವರ ಜೊತೆ ಸಂಪರ್ಕದಲ್ಲಿರುವ ಬಗ್ಗೆಯೂ ಮಾಹಿತಿ ಬಂದಿದೆ. ಆದ್ದರಿಂದ ಈ ಬಗ್ಗೆ ಎಫ್‌ಐಆರ್‌ ದಾಖಲಿಸಿಕೊಂಡು ವಿಸ್ತೃತ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕುʼ ಎಂದು ಕಾಂತಕುಮಾರ್ ದೂರಿನಲ್ಲಿ ಉಲ್ಲೇಖಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News