ಬೆಂಗಳೂರು: ಅ.7: KPSC ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿರುವ KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಸದಸ್ಯೆ ಗೀತಾ ಅವರನ್ನು ಇಂದು ಮಧ್ಯಾಹ್ನ 3 ಗಂಟೆಗೆ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ನ್ಯಾಯಾಧೀಶರ ನಿವಾಸದಲ್ಲಿ ಇಬ್ಬರನ್ನು ಹಾಜರುಪಡಿಸಿದ್ದ ಹಿನ್ನೆಲೆಯಲ್ಲಿ ಕೆಲವೇ ಗಂಟೆಗಳ ಅವಧಿಗೆ ಇ.ಡಿ. ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದರು. ಹೆಚ್ಚಿನ ಅವಧಿಯ ಕಸ್ಟಡಿ ಅಗತ್ಯವಿದ್ದರೆ ತೆರೆದ ನ್ಯಾಯಾಲಯದಲ್ಲಿ ಆರೋಪಿಗಳನ್ನು ಹಾಜರುಪಡಿಸುವಂತೆ ಸೂಚಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಶಿವಶಂಕರಪ್ಪ ಸಾಹುಕಾರ್ ಹಾಗೂ ಗೀತಾ ಅವರನ್ನು ಬೆಂಗಳೂರಿನ ಸಿಸಿಹೆಚ್-4 ನ್ಯಾಯಾಲಯಕ್ಕೆ ಹಾಜರುಪಡಿಸಿ, 14 ದಿನಗಳ ಇ.ಡಿ. ಕಸ್ಟಡಿಗೆ ನೀಡುವಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ಮನವಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

KPSC ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸದ ಮೇಲೆ ಇ.ಡಿ. ಅಧಿಕಾರಿಗಳು ಎರಡನೇ ಬಾರಿಗೆ ದಾಳಿ ನಡೆಸಿದ್ದರು. ದಾಳಿ ವೇಳೆ ಶಿವಶಂಕರಪ್ಪ ಸಾಹುಕಾರ್ ಹಾಗೂ ಗೀತಾ ಅವರನ್ನು ಬಂಧಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor