ಬೆಂಗಳೂರು : ಕೆಪಿಎಸ್‌ಸಿಯು ಪಶು ವೈದ್ಯಾಧಿಕಾರಿಗಳು ಹಾಗೂ ಇತರೆ ಹುದ್ದೆಗಳಿಗೆ ನಡೆಸಿದ ನೇಮಕ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಪಿತೂರಿಯನ್ನು ಬಯಲಿಗೆಳೆದು ಅಪರಾಧಿಗಳನ್ನು ಪತ್ತೆ ಹಚ್ಚಲು ಹೈಕೋರ್ಟ್‌ ರಚಿಸಿದ್ದ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ಡಿಜಿಪಿ ಅಲೋಕ್ ಕುಮಾರ್ ಸೇರಿ ಇಬ್ಬರನ್ನು ಕೈಬಿಡಲಾಗಿದೆ.

ರಾಜ್ಯ ಸರಕಾರದ ಆಕ್ಷೇಪದ ಹಿನ್ನೆಲೆಯಲ್ಲಿ ಅಧಿಕಾರಿಗಳ ಬದಲಾವಣೆ ಮಾಡಲಾಗಿದೆ. ಈ ಸ್ಥಾನಗಳಿಗೆ ಇಬ್ಬರ ಹೆಸರುಗಳನ್ನು ಹೈಕೋರ್ಟ್‌ಗೆ ಎರಡು ವಾರಗಳಲ್ಲಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೆಶನ ನೀಡಿದೆ.

ಕೆಪಿಎಸ್‌ಸಿ ಅಕ್ರಮದ ತನಿಖೆಗೆ ಎಸ್‌ಐಟಿ ರಚಿಸಿ ಹೈಕೋರ್ಟ್‌ ತೀರ್ಪು ನೀಡಿರುವುದನ್ನು ಪ್ರಶ್ನಿಸಿ ರಾಜ್ಯ ಸರಕಾರವು ಸುಪ್ರೀಂ ಕೋರ್ಟ್‌ಗೆ ಸೆ.26ರಂದು ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor