ಬೆಂಗಳೂರು: ಕೆಪಿಎಸ್ ಸಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ರಚಿಸಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ತನಿಖೆಯನ್ನು ಚುರುಕುಗೊಳಿಸಿದೆ. ಇದರ ಭಾಗವಾಗಿ ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ರನ್ನು ಎಸ್ಐಟಿ ಏಳು ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದೆ.

ತನಿಖೆ ಆರಂಭಿಸಿರುವ ಎಸ್ಐಟಿ ಶಿವಶಂಕರಪ್ಪ ಸಾಹುಕಾರ್ ನನ್ನು ವಶಕ್ಕೆ ಕೇಳಿ ಒಂದನೇ ಎಸಿಎಂಎಂ ನ್ಯಾಯಾಲಯದಲ್ಲಿ ಮನವಿ ಮಾಡಿತ್ತು. ಎಸ್ಐಟಿ ಮನವಿಯನ್ನು ಪುರಸ್ಕರಿಸಿರುವ ನ್ಯಾಯಾಲಯವು ನ.19ರ ವರೆಗೂ ಶಿವಶಂಕರಪ್ಪ ಸಾಹುಕಾರ್ ನನ್ನು ಎಸ್ಐಟಿ ವಶಕ್ಕೆ ನೀಡಿ ಆದೇಶ ಮಾಡಿದೆ.

ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದ ಜಾರಿ ನಿರ್ದೇಶನಾಲಯ(ಇ.ಡಿ) ಅಕ್ಟೋಬರ್ 6ರಂದು ವಿಚಾರಣೆಗೆ ಬಂದಿದ್ದ ಶಿವಶಂಕರಪ್ಪ ಸಾಹುಕಾರ್ ರನ್ನು ಬಂಧಿಸಿತ್ತು. ಸದ್ಯ ಪರಪ್ಪನ ಆಗ್ರಹಾರ ಜೈಲಿನಲ್ಲಿರುವ ಶಿವಶಂಕರಪ್ಪರನ್ನು ಎಸ್ಐಟಿ ವಶಕ್ಕೆ ಪಡೆದಿದ್ದು, ತನಿಖೆ ಚುರುಕುಗೊಂಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor