×
Ad

ಕೆಸೆಟ್: ಡಿ.10ರಿಂದ 12ರ ವರೆಗೆ ದಾಖಲೆ ಪರಿಶೀಲನೆ

Update: 2025-12-06 23:27 IST

ಬೆಂಗಳೂರು : 2023, 2024 ಮತ್ತು 2025ನೆ ಸಾಲಿನ ಕೆ-ಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದು, ಇದುವರೆಗೂ ಮೂಲ ದಾಖಲೆಗಳ ಪರಿಶೀಲನೆಗೆ ಗೈರಾದವರ ಸಲುವಾಗಿ ಡಿ.10ರಿಂದ 12ರವರೆಗೆ ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಅರ್ಹ ಅಭ್ಯರ್ಥಿಗಳು, ಮೂಲ ದಾಖಲೆಗಳ ಸಮೇತ ಬಂದು ಪರಿಶೀಲನೆ ಮಾಡಿಸಿಕೊಳ್ಳಬೇಕು. ಎಲ್ಲವೂ ಸರಿ ಇದ್ದರೆ ಸ್ಥಳದಲ್ಲೇ ಪ್ರಮಾಣ ಪತ್ರ ನೀಡಲಾಗುತ್ತದೆ. ಡಿ.10ರಂದು ಬೆಳಗಿನ ವೇಳೆಯಲ್ಲಿ 2023ನೆ ಸಾಲಿನ ಅಭ್ಯರ್ಥಿಗಳು ಹಾಗೂ ಅದೇ ದಿನ ಮಧ್ಯಾಹ್ನದ ನಂತರ 2024ನೇ ಸಾಲಿನ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಡಿ.11 ಮತ್ತು 12ರಂದು 2025ನೆ ಸಾಲಿನ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಇರುತ್ತದೆ. ಹೆಚ್ಚಿನ ವಿವರಗಳಿಗೆ ಕೆಇಎ ವೆಬ್‍ಸೈಟ್ ನೋಡಬೇಕು ಎಂದು ಪ್ರಸನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News