ಲಾವಣ್ಯ ಬಲ್ಲಾಳ್ ಜೈನ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ; ಆದೇಶ
Update: 2026-01-31 19:31 IST
ಲಾವಣ್ಯ ಬಲ್ಲಾಳ್ ಜೈನ್
ಬೆಂಗಳೂರು : ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್ ಜೈನ್ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ 'ರಾಜ್ಯ ಸಚಿವರ' ಸ್ಥಾನಮಾನ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.