ನಾಯಕತ್ವ ಬಿಕ್ಕಟ್ಟು ಇತ್ಯರ್ಥ; ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ಯಾರಾಗಲಿದ್ದಾರೆ ಸಾರಥಿ ?
Update: 2026-05-28 13:45 IST
ಬೆಂಗಳೂರು, ಮೇ 28: ರಾಜ್ಯದಲ್ಲಿ 'ನಾಯಕತ್ವ ಬದಲಾವಣೆ ಬಿಕ್ಕಟ್ಟು' ಇತ್ಯರ್ಥವಾಗುವ ಅಂತಿಮ ಹಂತಕ್ಕೆ ಬಂದಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ಯಾರು ಸಾರಥಿಯಾಗಲಿದ್ದಾರೆ ಎಂಬ ಕುತೂಹಲ ಸೃಷ್ಟಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ 'ಅಹಿಂದ' ಮುಖಂಡ ಎಂದೇ ಬಿಂಬಿತರಾಗಿರುವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗುವ ಸಾಧ್ಯತೆಗಳಿವೆ. ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯ ಬಳಿಕ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೆಸರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಕಟಿಸುವ ನಿರೀಕ್ಷೆ ಇದೆ ಎಂದು ತಿಳಿದುಬಂದಿದೆ.