ನಟ ಪ್ರಥಮ್‍ಗೆ ಜೀವ ಬೆದರಿಕೆ : ದೂರು ದಾಖಲು
Update: 2024-06-19 19:40 IST
ಬೆಂಗಳೂರು: ಬಿಗ್‍ಬಾಸ್ ಖ್ಯಾತಿಯ, ನಟ ಪ್ರಥಮ್‍ಗೆ ಜೀವ ಬೆದರಿಕೆ ಕರೆಗಳು ಬಂದಿದ್ದು, ಈ ಸಂಬಂಧ ನಗರದ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇತ್ತೀಚೆಗೆ ನಟ ಪ್ರಥಮ್ ರೇಣುಕಾಸ್ವಾಮಿ ಪ್ರಕರಣ ಸಂಬಂಧ ಮಾತನಾಡಿದ್ದರು. ಇದು ದರ್ಶನ್ ಅವರ ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಪ್ರಥಮ್ ಅವರಿಗೆ ದರ್ಶನ್ ಅಭಿಮಾನಿಗಳಿಂದ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕೆಲವು ಅಂಧಾಭಿಮಾನಿಗಳು ನನಗೆ ನಿರಂತರ ಫೋನ್ ಕರೆಗಳನ್ನು ಮಾಡಿ ತಲೆ ಕತ್ತರಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.