ಬೆಂಗಳೂರು: ಬೆಂಗಳೂರಿನಲ್ಲಿ ನವೆಂಬರ್ 17 ಹಾಗೂ 18ರಂದು ನಡೆಯಲಿರುವ ಕಾಮನ್ ವೆಲ್ತ್ ಮಹಿಳಾ ಸಂಸದೀಯ ಪಟುಗಳ ಭಾರತೀಯ ಪ್ರಾದೇಶಿಕ ಸಮ್ಮೇಳನದ ಲೋಗೋವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಅನಾವರಣಗೊಳಿಸಿದರು.

ಈ ಸಂದರ್ಭ ಕಾಮನ್ ವೆಲ್ತ್ ಮಹಿಳಾ ಸಂಸದೀಯ ಪಟುಗಳ ಭಾರತ ವಿಭಾಗದ ಅಧ್ಯಕ್ಷೆ ಡಿ. ಪುರಂದೇಶ್ವರಿ, ವಿಧಾನ ಸಭಾಧ್ಯಕ್ಷ ಜಿ.ಎಸ್.ಪಾಟೀಲ, ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್, ಉಪ ಸಭಾಪತಿ ಉಮಾಶ್ರೀ, ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜು, ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಹಾಗೂ ವಿಧಾನ ಪರಿಷತ್ ಕಾರ್ಯದರ್ಶಿ ಜ್ಯೋತಿ ಉಪಸ್ಥಿತರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor