×
Ad

ಲೋಕಸಭಾ ಚುನಾವಣೆ : 290 ರೌಡಿಶೀಟರ್ ಗಳ ಮನೆಗಳ ಮೇಲೆ ದಾಳಿ, ಶೋಧ

Update: 2024-03-27 21:35 IST

ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಉತ್ತರ ವಿಭಾಗದ ಪೊಲೀಸರು ನಗರದ 290 ರೌಡಿಶೀಟರ್ ಗಳ ಮನೆಗಳ ಮೇಲೆ ದಾಳಿ ಮಾಡಿ ಶೋಧ ನಡೆಸಿರುವುದಾಗಿ ವರದಿಯಾಗಿದೆ.

ಉತ್ತರ ವಿಭಾಗದ ಡಿಸಿಪಿ ಅವರ ನೇತೃತ್ವದಲ್ಲಿ ಎಸಿಪಿ ಹಾಗೂ ಇನ್‍ಸ್ಪೆಕ್ಟರ್ ಗಳು ಸೇರಿ 50 ಪೊಲೀಸರ ತಂಡ ಏಕಕಾಲಕ್ಕೆ ಈ ದಾಳಿ ನಡೆಸಿದ್ದು, ಮಾ.26ರ ರಾತ್ರಿ 11 ಗಂಟೆಯಿಂದ ಮಾ.27ರ ಬೆಳಗಿನ ಜಾವ 2 ಗಂಟೆಯವರೆಗೆ ಕಾರ್ಯಾಚರಣೆ ಕೈಗೊಂಡು ರೌಡಿಶೀಟರ್ ಗಳ ಮೊಬೈಲ್ ಸಂಖ್ಯೆ, ಪ್ರಸ್ತುತ ಮಾಡುತ್ತಿರುವ ಉದ್ಯೋಗದ ಬಗ್ಗೆ ಮಾಹಿತಿ ಪಡೆದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಉತ್ತರ ವಿಭಾಗದ ರಾಜಗೋಪಾಲ ನಗರ, ಆರ್ ಎಂಸಿ ಯಾರ್ಡ್, ಪೀಣ್ಯ ಸೇರಿದಂತೆ ವಿವಿಧ ನಗರಗಳಲ್ಲಿ ವಾಸವಾಗಿರುವ ರೌಡಿಶೀಟರ್ ಗಳ ಮನೆ ಮೇಲೆ ದಾಳಿ ಮಾಡಿ ಶೋಧ ನಡೆಸಿ ಯಾವುದೇ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಸೂಚಿಸಿದ್ದು, ಒಂದು ವೇಳೆ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News