×
Ad

ಲೋಕಸಭಾ ಚುನಾವಣೆ : ವೇತನ ಸಹಿತ ರಜೆ ಘೋಷಣೆ

Update: 2024-03-26 12:35 IST

ಚುನಾವಣಾ ಆಯೋಗ Photo: PTI

ಬೆಂಗಳೂರು : ಲೋಕಸಭಾ ಚುನಾವಣೆಯು ಕರ್ನಾಟಕ ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆಯಲಿದ್ದು, ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕೆಂದು ಕೇಂದ್ರ ಚುನಾವಣಾ ಆಯೋಗ ಸೂಚನೆ ನೀಡಿದೆ.

ಮೊದಲ ಹಂತ ಎ.26ಕ್ಕೆ, ಎರಡನೇ ಹಂತ ಮತ್ತು ಸುರಪುರ ಕ್ಷೇತ್ರದ ಉಪಚುನಾವಣೆ ಮೇ 7ರಂದು ನಡೆಯಲಿದ್ದು, ಮೇಲ್ಕಂಡ ದಿನಗಳಂದು ಕಾರ್ಮಿಕರಿಗೆ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು)ಕಾಯ್ದೆಯ ಕಲಂ 3-ಎ ಹಾಗೂ 1951 ಪ್ರಜಾ ಪ್ರತಿನಿಧಿ ಕಾಯ್ದೆಯ ಕಲಂ.135(ಬಿ) ಅಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲ ಸಂಸ್ಥೆಗಳು/ನಿಯೋಜಕರು ಅನುವು ಮಾಡಿ ಕೊಡಬೇಕು ಎಂದು ನಿರ್ದೇಶನ ನೀಡಲಾಗಿದೆ.

ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಮತ ಚಲಾಯಿಸುವ ಅರ್ಹ ಕಾರ್ಮಿಕರು ಮತದಾನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರ ಸಂಸ್ಥೆಗಳ ಮಾಲಕರು ವೇತನ ಸಹಿತ ರಜೆ ನೀಡುವ ಆದೇಶ ಉಲ್ಲಂಘಿಸಿದರೆ ಸಂಬಂಧಪಟ್ಟ ಸಂಸ್ಥೆ/ನಿಯೋಜಕರ ವಿರುದ್ದ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಆಯೋಗ ಪ್ರಕಟನೆಯಲ್ಲಿ ಎಚ್ಚರಿಕೆ ನೀಡಿದೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News