×
Ad

ರಾಜ್ಯಾದ್ಯಂತ ಏಳು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ

Update: 2025-05-15 09:43 IST

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಏಳು ಸರಕಾರಿ ಅಧಿಕಾರಿಗಳ ಮನೆಗಳ ಮೇಲೆ ಗುರುವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ 12, ಬೆಂಗಳೂರು ಗ್ರಾಮಾಂತರದಲ್ಲಿ 8, ತುಮಕೂರಿನಲ್ಲಿ 7, ಯಾದಗಿರಿಯಲ್ಲಿ 5, ಮಂಗಳೂರಿನಲ್ಲಿ 4 ಹಾಗೂ ವಿಜಯಪುರದಲ್ಲಿ 4 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ತುಮಕೂರಿನ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರಾಜಶೇಖರ್, ದಕ್ಷಿಣ ಕನ್ನಡ ಜಿಲ್ಲೆಯ ಸರ್ವೇ ಮೇಲ್ವಿಚಾರಕ ಮಂಜುನಾಥ್, ವಿಜಯಪುರದ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ, ಬೆಂಗಳೂರು ನಗರದ ನಗರ ಮತ್ತು ಗ್ರಾಮೀಣ ಯೋಜನಾ ನಿರ್ದೇಶನಾಲಯದ ಹೆಚ್ಚುವರಿ ನಿರ್ದೇಶಕ ಮುರಳಿ ಟಿ.ವಿ., ಕಾನೂನು ಮಾಪನಶಾಸ್ತ್ರದ ಇನ್ ಸ್ಪೆಕ್ಟರ್ ಎಚ್. ಆರ್. ನಟರಾಜ್, ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲೂಕು ಕಚೇರಿಯ ಎಸ್.ಡಿ.ಎ. ಅನಂತ್ ಕುಮಾರ್ ಹಾಗೂ ಯಾದಗಿರಿಯ ಶಹಾಪುರ ತಾಲೂಕಿನ ಉಮಾಕಾಂತ ಎಂಬವರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News