×
Ad

ರಾಜ್ಯದ ಏಳು ಕಡೆಗಳಲ್ಲಿ ಲೋಕಾಯುಕ್ತ ದಾಳಿ

Update: 2025-01-31 10:24 IST

ಬೆಂಗಳೂರು: ಇಂದು ಬೆಳಗ್ಗೆ ರಾಜ್ಯದ ವಿವಿಧ ಇಲಾಖೆಗಳ ಏಳು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ, ಶೋಧ ಕಾರ್ಯ ನಡೆಸುತ್ತಿದ್ದಾರೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯದ ಒಟ್ಟು ಏಳು ಸ್ಥಳಗಳಲ್ಲಿ ದಾಳಿ ನಡೆದಿದೆ.

ಬೆಂಗಳೂರಿನಲ್ಲಿ ಎರಡು ಕಡೆ, ಬೆಳಗಾವಿಯಲ್ಲಿ ಎರಡು ಕಡೆ, ಚಿತ್ರದುರ್ಗು, ರಾಯಚೂರು ಮತ್ತು ಬಾಗಕೋಟೆಯಲ್ಲಿ ತಲಾ ಒಂದು ಸ್ಥಳಗಳಲ್ಲಿ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಬಿಬಿಎಂಪಿ ಹೆಬ್ಬಾಳ ವ್ಯಾಪ್ತಿಯ ಇಂಜಿನಿಯರಿಂಗ್ ವಿಭಾಗದ ಎಇಇ ಮಾಧವ ರಾವ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಡೆಪ್ಯುಟಿ ಕಾರ್ಯದರ್ಶಿ ಟಿ.ಕೆ.ರಮೇಶ್ ಎಂಬವರ ಮನೆಗಳ ಮೇಲೆ ದಾಳಿ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News