ಬೆಂಗಳೂರು : ಮಹದೇವಪುರ ವ್ಯಾಪ್ತಿಯ ದೊಡ್ಡಗುಬ್ಬಿಯ 125 ಎಕರೆ ವಿಸ್ತೀರ್ಣದ ಕೆರೆಯಲ್ಲಿ ಏಕಾಏಕಿ ಸಾವಿರಾರು ಮೀನುಗಳು ಸತ್ತು ಬಿದ್ದಿರುವುದು ಕಂಡುಬಂದಿದ್ದು, ನೀರಿನಲ್ಲಿ ರಸಾಯನಿಕ ಮಿಶ್ರಣದಿಂದ ಈ ಘಟನೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ರವಿವಾರ ಈ ಕುರಿತು ಪರಿಸರ ಮಾಲಿನ್ಯಾಧಿಕಾರಿಗಳು ಪ್ರತಿಕ್ರಿಯಿಸಿದ್ದು, ಸಂಸ್ಕರಿಸದ ಒಳಚರಂಡಿ ನೀರು ಕೆರೆಗೆ ಸೇರಿ ಈ ಸಮಸ್ಯೆ ಉಂಟಾಗಿರಬಹುದು. ಇದರ ಬಗ್ಗೆ ಕೂಡಲೇ ಪರಿಶೀಲನೆ ನಡೆಸಿ ವರದಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

ಕೆರೆಗೆ ಸೇರಿದ ಒಳಚರಂಡಿ ನೀರಿನಲ್ಲಿರುವ ಸಾವಯವ ವಸ್ತುಗಳು ಮತ್ತು ಪಾಚಿಗಳು ಕೊಳೆಯುವಾಗ, ಅದರಲ್ಲಿನ ಸೂಕ್ಷ್ಮಜೀವಿಗಳು ಹೆಚ್ಚಿನ ಪ್ರಮಾಣದಲ್ಲಿ ನೀರಿನಲ್ಲಿ ಕರಗಿರುವ ಆಮ್ಲಜನಕವನ್ನು ಬಳಸಿಕೊಳ್ಳುತ್ತವೆ. ಇದರಿಂದ ನೀರಿನಲ್ಲಿ ಆಮ್ಲಜನಕದ ಕೊರತೆ ಉಂಟಾಗಿ ಮೀನುಗಳು ಸಾಯುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor