×
Ad

ಬೆಂಗಳೂರು: ಮದುವೆ ವಿಚಾರವಾಗಿ ಮಹಾಲಕ್ಷ್ಮಿ ಕೊಲೆ!

Update: 2024-09-27 20:39 IST

ಮಹಾಲಕ್ಷ್ಮಿ

ಬೆಂಗಳೂರು: ಮಹಾಲಕ್ಷ್ಮಿ ಭೀಕರ ಕೊಲೆಯು ಮದುವೆ ವಿಚಾರವಾಗಿ ನಡೆದಿದೆ ಎಂಬ ಅಂಶ ತಿಳಿದು ಬಂದಿದೆ. ಇದರ ಬಗ್ಗೆ ತನಿಖೆ ಮುಂದುವರೆದಿದ್ದು ಸ್ಪಷ್ಟತೆ ಸಿಗಬೇಕಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾಲಕ್ಷ್ಮಿ ಹತ್ಯೆಗೆ ಸಂಬಂಧಿಸಿದಂತೆ ತನಿಖೆ ಇನ್ನೂ ನಡೆಯುತ್ತಿದೆ. ಕೊಲೆ ಮಾಡಿದ ಆರೋಪಿ ಮುಕ್ತಿ ರಂಜನ್ ರಾಯ್ ಒಡಿಶಾದ ಭದ್ರಪ್ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆ ಸ್ಥಳದಲ್ಲಿ ಡೆತ್ ನೋಟ್ ದೊರೆತಿದೆ. ಪೊಲೀಸರ ತಂಡ ಪ್ರಕರಣದ ತನಿಖೆ ಚುರುಕುಗೊಳಿಸಿದೆ ಎಂದರು.

ಮಹಾಲಕ್ಷ್ಮಿಯನ್ನು ಕೊಲೆ ಮಾಡಿದ ಬಳಿಕ ಆರೋಪಿ ಮುಕ್ತಿ ರಂಜನ್ ರಾಯ್ ದ್ವಿಚಕ್ರ ವಾಹನದಲ್ಲಿ ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಮಾರ್ಗವಾಗಿ 1,550 ಕಿ.ಮೀ. ಸಾಗಿ ತನ್ನ ಊರಾದ ಒಡಿಶಾದ ಭದ್ರಕ್ ಬಳಿಯ ಬೋನಿಪುರಗೆ ತೆರಳಿದ್ದಾನೆ ಎಂದು ತಿಳಿದುಬಂದಿದೆ. ಆತ ತನ್ನ ತಮ್ಮನಿಗೆ ಮಹಾಲಕ್ಷ್ಮೀಯನ್ನು ಕೊಲೆ ಮಾಡಿರುವ ಬಗ್ಗೆ ತಿಳಿಸಿದ್ದನೆಂದು ಗೊತ್ತಾಗಿದೆ ಎಂದು ಬಿ.ದಯಾನಂದ್ ಹೇಳಿದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News