×
Ad

ಬಿಬಿಎಂಪಿ ಮುಖ್ಯ ಆಯುಕ್ತರಾಗಿ ಮಹೇಶ್ವರ್ ರಾವ್ ಎಂ ನೇಮಕ

Update: 2025-04-28 23:31 IST

ಮಹೇಶ್ವರ್ ರಾವ್ ಎಂ

ಬೆಂಗಳೂರು:  ಬಿ ಎಂ ಆರ್ ಸಿ ಎಲ್ ನ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ರಾವ್ ಎಂ ಅವರನ್ನು ಬಿಬಿಎಂಪಿ ಮುಖ್ಯ ಆಯುಕ್ತರಾಗಿ ಹೆಚ್ಚುವರಿ ಹುದ್ದೆಗೆ ನೇಮಕ ಮಾಡಲಾಗಿದೆ.

ಈ ಕುರಿತು ಸೋಮವಾರ ರಾಜ್ಯ ಸರಕಾರ ಅಧಿಸೂಚನೆಯನ್ನು ಹೊರಡಿಸಿದ್ದು, ನಗರಾಭಿವೃದ್ಧಿ ಇಲಾಖೆ ಹಾಗೂ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಉಮಾಶಂಕರ್ ಎಸ್. ಆರ್. ಎಪ್ರಿಲ್ 30ರಂದು ನಿವೃತ್ತಿಯಾಗಲಿದ್ದಾರೆ.

ಹೀಗಾಗಿ ಬಿಬಿಎಂಪಿ ಮುಖ್ಯ ಆಯುಕ್ತರಾಗಿದ್ದ ತುಷಾರ್ ಗಿರಿನಾಥ್ ಅವರನ್ನು ಎ.30ರಿಂದ ಜಾರಿಗೆ ಬರುವಂತೆ ನಗರಭಿವೃದ್ಧಿ ಇಲಾಖೆ ಹಾಗೂ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News