×
Ad

ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿ : ಮಲ್ಲಿಕಾರ್ಜುನ ಖರ್ಗೆ

Update: 2025-04-26 20:01 IST

ಬೆಂಗಳೂರು : ಕರ್ನಾಟಕ ಪ್ರಗತಿಪರ ರಾಜ್ಯ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಶನಿವಾರ ನಗರದ ಕೆ.ಜೆ.ಹಳ್ಳಿಯ ಡಾ.ಬಿ.ಆರ್.ಅಂಬೇಡ್ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಆದರೂ ಅವರ ಬಗ್ಗೆ ಇಲ್ಲಸಲ್ಲದ ಮಾತುಕತೆಗಳು ಕೇಳಿ ಬರುತ್ತಿರುವುದು ಸರಿಯಲ್ಲ ಎಂದರು.

ಪರಿಶಿಷ್ಟ ಸಮುದಾಯ ಮತ್ತು ಹಿಂದುಳಿದವರಿಗೆ ಆರ್ಥಿಕ, ಶಿಕ್ಷಣ ಮತ್ತು ಮಾನಸಿಕ ಶಕ್ತಿ ಬಂದಾಗ ಮತ್ತಷ್ಟು ಪ್ರಬಲರಾಗಲು ಸಾಧ್ಯ. ಅಂಬೇಡ್ಕರ್ ಅವರ ಹಾದಿಯಲ್ಲಿ ಸಾಗಿ ಎಲ್ಲರೂ ಶಿಕ್ಷಣವಂತರಾಗಬೇಕು. ದೇಶದ ಉನ್ನತ ಸ್ಥಾನಗಳನ್ನು ಪಡೆದುಕೊಳ್ಳಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಅಂಬೇಡ್ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಉತ್ತಮ ಸೇವೆ ಸಲ್ಲಿಸುತ್ತಿದೆ. ಸಂವಿಧಾನದ ಉದ್ದೇಶಗಳನ್ನು ಈಡೇರಿಸಲು ಎಲ್ಲರೂ ಜೊತೆಯಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ತಿಳಿಸಿದರು.

ಈ ವೇಳೆ ಅಂಬೇಡ್ಕರ್ ವೈದ್ಯಕೀಯ ಕಾಲೇಜಿನ ಕಟ್ಟಡ ಮತ್ತು ಮಹಿಳೆಯ ವಸತಿ ನಿಲಯವನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಸಂಸದ ರಾಧಾಕೃಷ್ಣ, ಶಾಸಕ ಎ.ಸಿ.ಶ್ರೀನಿವಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News