ಅ.12ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದ ‘ಮಂಗಳೂರು ದಸರಾ’ ಉದ್ಘಾಟನೆ
ಸಾಂದರ್ಭಿಕ ಚಿತ್ರ
ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅ.12ರ ಸಂಜೆ 6 ಗಂಟೆಗೆ ಮಂಗಳೂರಿನ ಕುದ್ರೋಳಿಯಲ್ಲಿರುವ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಆಯೋಜಿಸಿರುವ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ.
ಅ.12ರ ಮಧ್ಯಾಹ್ನ 1.30ಕ್ಕೆ ಚೆನ್ನೈ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಡಲಿರುವ ಮುಖ್ಯಮಂತ್ರಿ, ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದ್ದಾರೆ.
ಮಧ್ಯಾಹ್ನ 3.40ಕ್ಕೆ ಉಡುಪಿ ಜಿಲ್ಲೆಯ ಉಚ್ಚಿಲ ಸಮೀಪದ ಮಹಾಲಕ್ಷ್ಮಿ ನಗರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಆಯೋಜಿಸಲಾಗಿರುವ ಅಭಿನಂದನಾ ಸಮಾರಂಭ ಮತ್ತು ಮಹಿಳಾ ದಸರಾವನ್ನು ಶಿವಕುಮಾರ್ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.