×
Ad

ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ಮಂಜುನಾಥ್‍ಗೌಡ ಅಧಿಕಾರ ಸ್ವೀಕಾರ

Update: 2024-03-27 22:06 IST

ಬೆಂಗಳೂರು: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‍ನ ನೂತನ ಕಾರ್ಯಾಧ್ಯಕ್ಷರಾಗಿ ಎಚ್.ಎಸ್ ಮಂಜುನಾಥ ಗೌಡ ಅವರು ಬುಧವಾರ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು.

ಎರಡು ಬಾರಿ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಸಂಘಟನೆ ಎನ್‍ಎಸ್‍ಯುಐನ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಮಂಜುನಾಥ್‍ಗೌಡ ಅವರು ಈಗ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಈ ವೇಳೆ ಮಾತನಾಡಿದ ಮಂಜುನಾಥ ಗೌಡ, ಯಾರು ಇರಲಿ, ಇಲ್ಲದಿರಲಿ ಪಕ್ಷ ಮುನ್ನಡೆಯುತ್ತದೆ. ವ್ಯಕ್ತಿಗಿಂತ ಪಕ್ಷ ದೊಡ್ಡದು ಎಂದು ಕೆಪಿಸಿಸಿ ಅಧ್ಯಕ್ಷರು ಯಾವಾಗಲೂ ಹೇಳುತ್ತಾರೆ. ಅವರ ಮಾತು ನಿಜ. ನಾವೆಲ್ಲ ಅವರ ಕೈ ಬಲಪಡಿಸೋಣ. ಪಕ್ಷವನ್ನು ಸಂಘಟಿಸೋಣ. ನಾನು ಈ ಮಟ್ಟಕ್ಕೆ ಬೆಳೆಯಲು ಶಿವಕುಮಾರ್ ಅವರ ಆಶೀರ್ವಾದ ಕಾರಣವಾಗಿದೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News