×
Ad

ಮಹದೇವಪುರ ಕ್ಷೇತ್ರದ ಕಾಂಗ್ರೆಸ್ ನಾಯಕರ ಜೊತೆ ಮನ್ಸೂರ್ ಅಲಿಖಾನ್ ಸಭೆ

Update: 2024-04-05 22:02 IST

ಬೆಂಗಳೂರು: ಮಹದೇವಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕರ ಜೊತೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಸಭೆ ನಡೆಸಿದರು.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್ ನಾಯಕ ಗಫಾರ್ ಬೇಗ್ ಅವರ ವೈಟ್‍ಫೀಲ್ಡ್‍ನಲ್ಲಿರುವ ನಿವಾಸದಲ್ಲಿ ನಡೆದ ಸಭೆಯಲ್ಲಿ ಮನ್ಸೂರ್ ಅಲಿಖಾನ್ ಈ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗಫಾರ್ ಬೇಗ್, ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಆಕಾಂಕ್ಷಿಯಾಗಿದ್ದೆ. ಆದರೆ, , ಕಾಂಗ್ರೆಸ್ ಪಕ್ಷವು ಮನ್ಸೂರ್ ಅಲಿಖಾನ್ ಅವರಿಗೆ ಟಿಕೆಟ್ ನೀಡಿದೆ. ನಾವು ಪಕ್ಷದ ಶಿಸ್ತಿನ ಸಿಪಾಯಿಗಳಾಗಿದ್ದು, ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಲು ಪ್ರಾಮಾಣಿಕವಾಗಿ ಶ್ರಮವಹಿಸುತ್ತೇವೆ ಎಂದರು.

ಈ ಸಂದರ್ಭದಲ್ಲಿ ಶಿವಾಜಿನಗರ ಶಾಸಕ ರಿಝ್ವಾನ್ ಅರ್ಶದ್, ಡಿವೈನ್ ಸರ್ವೀಸ್ ಫೌಂಡೇಶನ್ (ಡಿಎಸ್‍ಎಫ್) ಮುಖ್ಯಸ್ಥ ಡಾ.ಸೈಯದ್ ಮುಝಮ್ಮಿಲ್ ಅಹ್ಮದ್ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News