×
Ad

ಎಂಬಿಎ, ಎಂಸಿಎ ಪ್ರವೇಶ ಪರೀಕ್ಷೆ ಜೂ.14ಕ್ಕೆ ಮುಂದೂಡಿಕೆ

Update: 2026-05-14 22:15 IST

ಬೆಂಗಳೂರು, ಮೇ 14: ಇದೇ ತಿಂಗಳ 24ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‍ಗಳ ಪ್ರವೇಶಕ್ಕಾಗಿ ನಡೆಸುವ ಪಿಜಿಸಿಇಟಿ ಪರೀಕ್ಷೆಯನ್ನು ಜೂನ್ 14ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಗುರುವಾರ ಪ್ರಕಟನೆ ಹೊರಡಿಸಿರುವ ಅವರು, ಮೇ 24ರಂದು ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಇರುವ ಕಾರಣ ಈ ಬದಲಾವಣೆ ಮಾಡಲಾಗಿದೆ. ಈ ಹಿಂದೆ ಪ್ರಕಟಿಸಿದಂತೆ ಮೇ 23ರಂದು ಎಂ.ಟೆಕ್, ಎಂಬಿಎ ಹಾಗೂ ಡಿಸಿಇಟಿ ಪ್ರವೇಶ ಪರೀಕ್ಷೆಗಳು ನಡೆಯಲಿವೆ ಎಂದು ವಿವರಿಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News