ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ ಮತ್ತು ಔಷಧ ನಿಯಂತ್ರಣ ಇಲಾಖೆ ವಿಲೀನ
Update: 2024-12-14 19:08 IST
ಬೆಂಗಳೂರು : ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ ಮತ್ತು ಔಷಧ ನಿಯಂತ್ರಣ ಇಲಾಖೆಗಳನ್ನು ವಿಲೀನಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಎಂದು ಹೊಸದಾಗಿ ನಾಮಕರಣ ಮಾಡಲಾಗಿದ್ದು, ಹೊಸ ಇಲಾಖೆಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು ಮುಖ್ಯಸ್ಥರಾಗಿದ್ದಾರೆ. ಎರಡು ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯನಿರ್ವಹಣೆಗೆ ಸೂಚನೆ ನೀಡಲಾಗಿದೆ.