×
Ad

ಅ.3ರಂದು ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ

Update: 2024-10-01 20:17 IST

ಬೆಂಗಳೂರು : ನಾಗಸಂದ್ರ ಮತ್ತು ಮಾಧವರ ನಿಲ್ದಾಣಗಳ ನಡುವಿನ ಹೊಸ ಮಾರ್ಗವನ್ನು ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರಿಂದ ಶಾಸನಬದ್ಧ ಸುರಕ್ಷತಾ ತಪಾಸಣೆ ನಡೆಸುತ್ತಿರುವುದರಿಂದ ಅ.3ರಂದು ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಕಾರ್ಯಾಚರಣೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯತ್ಯಯವಾಗಲಿದೆ.

ಅ.3ರಂದು ನಾಗಸಂದ್ರ ಮತ್ತು ಪೀಣ್ಯ ಇಂಡಸ್ಟ್ರಿ ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಾಣಿಜ್ಯ ಸೇವೆ ಲಭ್ಯವಿರುವುದಿಲ್ಲ. ಈ ಅವಧಿಯಲ್ಲಿ ಪೀಣ್ಯ ಇಂಡಸ್ಟ್ರಿ ಮತ್ತು ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆ ಎಂದಿನಂತೆ ಲಭ್ಯವಿರುತ್ತದೆ. ಬೆಳಿಗ್ಗೆ 9.00 ಗಂಟೆಗೆ ರೇಷ್ಮೆ ಸಂಸ್ಥೆಯಿಂದ ಹೊರಡುವ ಕೊನೆಯ ರೈಲು ನಾಗಸಂದ್ರ ನಿಲ್ದಾಣಕ್ಕೆ ತಲುಪಲಿದೆ. ನೇರಳೆ ಮಾರ್ಗದ ಮೆಟ್ರೋ ರೈಲು ಕಾರ್ಯಾಚರಣೆಯಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ ಎಂದು ನಮ್ಮ ಮೆಟ್ರೋ ಪ್ರಕಟನೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News