×
Ad

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ: ಜ.25ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ

Update: 2025-01-23 19:49 IST

ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಸಿದ್ದರಾಮಯ್ಯ, ಅಧಿಕಾರಿಗಳ ಜೊತೆ ಸಭೆ ನಡೆಸಲು ತೀರ್ಮಾನಿಸಿದ್ದಾರೆ.

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಉಪಟಳ ಸಂಬಂಧ ಚರ್ಚೆ ನಡೆಸಲು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.25ಕ್ಕೆ ಸಭೆ ಕರೆದಿದ್ದಾರೆ.

ಹಾವೇರಿ, ಮೈಸೂರು, ಉಡುಪಿ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚುತ್ತಿದೆ. ಕಾಟ ತಾಳಲಾರದೆ ಜನ ಮನೆ, ಊರು ಬಿಟ್ಟು ಹೋಗುತ್ತಿದ್ದರೆ, ಮತ್ತೆ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News