ರಾಜ್ಯದಲ್ಲಿ ಬಂದ್ ಆಚರಿಸುವ ಅಗತ್ಯವಿಲ್ಲ: ಸಚಿವ ರಾಮಲಿಂಗಾರೆಡ್ಡಿ
Update: 2025-03-04 17:53 IST
ರಾಮಲಿಂಗಾರೆಡ್ಡಿ
ಬೆಂಗಳೂರು : ‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮ ಸ್ಥಿತಿಯಲ್ಲಿದ್ದು, ಯಾವುದೇ ರೀತಿಯ ಬಂದ್ ಆಚರಿಸುವ ಅಗತ್ಯವಿಲ್ಲ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಮತ್ತು ಕರ್ನಾಟಕದ ಬಸ್ ಸಂಚಾರ ಸುಗಮವಾಗಿದ್ದು ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಈ ಹಂತದಲ್ಲಿ ಕರ್ನಾಟಕ ಬಂದ್ ಅಗತ್ಯವಿಲ್ಲ ಎಂದರು.
ನಿರ್ವಾಹಕನ ಮೇಲೆ ಹಲ್ಲೆಯಾದ ಘಟನೆ ನಡೆದ 8 ದಿನ ಕಳೆದಿದೆ. ಮಹಾರಾಷ್ಟ್ರದಲ್ಲೂ ನಮ್ಮ ಚಾಲಕರಿಗೆ ಹಾಗೂ ನಿರ್ವಾಹಕರಿಗೆ ಮಸಿ ಬಳಿದಿದ್ದರು. ಅದಕ್ಕೂ ಪ್ರತಿಭಟನೆಗಳು ನಡೆದಿವೆ. ರಾಜ್ಯದ ನೆಲ, ಜಲ, ಭಾಷೆ ವಿಚಾರದಲ್ಲಿ ಹೋರಾಟಗಳಿಗೆ ನಮ್ಮ ಬೆಂಬಲವಿದೆ. ಆದರೆ, ಅನಗತ್ಯ ಬಂದ್ ನಡೆಸುವ ಅಗತ್ಯವಿಲ್ಲ ಎಂದು ಹೇಳಿದರು.