×
Ad

ಮಗನ ಮದುವೆ ಹಿನ್ನೆಲೆ ತುಂಗಭದ್ರಾ ಡ್ಯಾಂ ಗೇಟ್ ಉದ್ಘಾಟನೆಗೆ ಗೈರು : ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

Update: 2026-06-25 20:28 IST

ಬೆಂಗಳೂರು : ತಮ್ಮ ಮಗನ ಮದುವೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ತುಂಗಭದ್ರಾ ಅಣೆಕಟ್ಟಿನ ನೂತನ ಗೇಟ್‍ಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಗುರುವಾರ ಈ ಸಂಬಂಧ ಪ್ರಕಟಣೆ ನೀಡಿರುವ ರಾಮಲಿಂಗಾರೆಡ್ಡಿ ಅವರು, ಸುಮಾರು ಒಂದು ವರ್ಷಗಳ ಹಿಂದೆಯೆ ಇಂದಿನ ದಿನಾಂಕದಂದು ತಿರುಪತಿಯಲ್ಲಿ ಮಾಡುವುದು ನಿಶ್ಚಯವಾಗಿತ್ತು. ಆದುದರಿಂದ, ಕೊಪ್ಪಳ ಜಿಲ್ಲೆಯ ತುಂಗಭದ್ರ ಡ್ಯಾಮ್ ಗೇಟ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ.

ಈ ವಿಷಯವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಗಮನಕ್ಕೆ ತರಲಾಗಿತ್ತು. ಜೂ.18ರಂದು ನಾವು ತುಂಗಭದ್ರಾ ಡ್ಯಾಂ ಬಳಿ ಭೇಟಿ ನೀಡಿ ಸಿದ್ಧತೆ ಹಾಗೂ ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News