×
Ad

ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ

Update: 2026-06-25 13:24 IST

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರನ್ನಾಗಿ ಐಪಿಎಸ್ ಅಧಿಕಾರಿ, ಡಿಐಜಿ ಎಂ.ಎನ್.ಅನುಚೇತ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.

ಇದುವರೆಗೆ ಇಲಾಖೆಯ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ, ಎಡಿಜಿಪಿ ಹೇಮಂತ್ ಎಂ ನಿಂಬಾಳ್ಕರ್ ಅವರು ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ನೂತನ ಆಯುಕ್ತರಿಗೆ ಶುಭಕೋರಿದರು.

ಎಂ.ಎನ್.ಅನುಚೇತ್ ಅವರಿಗೆ ವಾರ್ತಾ ಇಲಾಖೆಯ ಜೊತೆಗೆ ಯುವ ಜನ ಸೇವೆ ಹಾಗೂ ಕ್ರೀಡಾ ಇಲಾಖೆಯ ಆಯುಕ್ತರ ಹೆಚ್ಚುವರಿ ಪ್ರಬಾರದಲ್ಲೂ ಇವರನ್ನು ಇರಿಸಿ ಸರ್ಕಾರ ಆದೇಶಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News