×
Ad

ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ಉದ್ಯಮಿ ಮೋಹನ್ ದಾಸ್ ಪೈ

Update: 2025-03-01 18:54 IST

ಬೆಂಗಳೂರು : ‘ಬೆಂಗಳೂರು ಅಭಿವೃದ್ಧಿ ಆಗುತ್ತಿಲ್ಲ, ನಗರದಲ್ಲಿ ಸಂಚಾರ ದಟ್ಟಣೆ ಮಿತಿ ಮೀರಿದೆ’ ಎಂದು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಉದ್ಯಮಿ ಮೋಹನ್ ದಾಸ್ ಪೈ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಶನಿವಾರ ಸದಾಶಿವನಗರದಲ್ಲಿ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಆಗಮಿಸಿದ ಮೋಹನ್ ದಾಸ್ ಪೈ ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದಂತೆ ಡಿಸಿಎಂ ಶಿವಕುಮಾರ್ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ನಗರದ ಅಭಿವೃದ್ಧಿ ಆಗಬೇಕು: ‘ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಬೆಂಗಳೂರು ಅಭಿವೃದ್ದಿಗೆ ಸಂಬಂಧಿಸಿದಂತೆ ಚರ್ಚೆ ಮಾಡಿದ್ದೇನೆ. ಬೆಂಗಳೂರು ಉತ್ತಮ ನಗರ, ಗ್ಲೋಬಲ್ ಸಿಟಿ, ಸೈನ್ಸ್ ಸಿಟಿಯೂ ಆಗಿದೆ. ನಮಗೆ ಭವಿಷ್ಯದ ದೃಷ್ಟಿಯಿಂದ ಬೆಂಗಳೂರಿಗೆ ಒಳ್ಳೆಯ ಅಭಿವೃದ್ಧಿ ಬೇಕು’ ಎಂದು ಮೋಹನ್ ದಾಸ್ ಪೈ ತಿಳಿಸಿದರು.

‘ನಗರದ ಪಾದಚಾರಿ ಮಾರ್ಗ, ರಸ್ತೆಗಳು, ನಮ್ಮ ಮೆಟ್ರೋ ಅಭಿವೃದ್ಧಿ ಆಗಬೇಕು. ಇನ್ನೂ ಆರು ತಿಂಗಳಲ್ಲಿ ಅಭಿವೃದ್ಧಿ ಮಾಡುತ್ತೇವೆಂದು ಶಿವಕುಮಾರ್ ಹೇಳಿದ್ದಾರೆ. ಹೀಗಾಗಿ ಸಮಸ್ಯೆ ಬಗೆಹರಿಸುವ ಭರವಸೆ ಇದೆ. ಬೆಂಗಳೂರಿನ ಸಮಸ್ಯೆಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದೇವೆ. ಇದನ್ನು ಕೆಲವರು ಸಕಾರಾತ್ಮಕವಾಗಿ ತೆಗೆದುಕೊಂಡಿದ್ದು, ಇನ್ನೂ ಕೆಲವರು ನಕಾರಾತ್ಮಕವಾಗಿ ಸ್ವೀಕರಿಸುತ್ತಾರೆ’ ಎಂದು ನುಡಿದರು.

ಬೊಮ್ಮಾಯಿ ಸಿಎಂ ಆಗಿದ್ದಾಗ ಭ್ರಷ್ಟಾಚಾರ ಬಗ್ಗೆ ಮಾತನಾಡಿದ್ದೆ. ಎಲ್ಲ ಸರಕಾರಗಳ ಬಗ್ಗೆಯೂ ಮಾತನಾಡಿದ್ದೇನೆ. ಎಲ್ಲ ಸಿಎಂಗಳು ನನ್ನ ಕರೆದು ಅಭಿಪ್ರಾಯ ಕೇಳಿದ್ದಾರೆ. ಬೆಂಗಳೂರು ಬಗ್ಗೆ ಅಂತರ ರಾಷ್ಟ್ರೀಯ ಗಮನಸೆಳೆದಿದೆ. ಬೇರೆ ಎಲ್ಲ ಕಡೆಯಿಂದ ನನ್ನನ್ನು ಕೇಳುತ್ತಾರೆ. ಬೆಂಗಳೂರು ನಮ್ಮ ನಗರ. ಬೇರೆ ನಗರಗಳ ಅಭಿವೃದ್ಧಿ ನಮಗೆ ಬೇಕಿಲ್ಲ ಎಂದು ಮೋಹನ್ ದಾಸ್ ಪೈ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News