ಬೆಂಗಳೂರು : ಎಂಎಸ್ಸಿ ನರ್ಸಿಂಗ್‌ ಕೋರ್ಸ್ ಪ್ರವೇಶಕ್ಕೆ ಸಂಬಂದಿಸಿದಂತೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಪೂರಕವಾಗಿ ಅಭ್ಯರ್ಥಿಗಳ ಮೆರಿಟ್ ಪಟ್ಟಿ ಹಾಗೂ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಶನಿವಾರ ಪ್ರಕಟಣೆ ನೀಡಿರುವ ಅವರು, ಅಭ್ಯರ್ಥಿಗಳು ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಿದ್ದು ವೇಳಾಪಟ್ಟಿ ಪ್ರಕಾರ ಪ್ರವೇಶ ಪಡೆಯಬೇಕು ಎಂದು ತಿಳಿಸಿದ್ದಾರೆ.

ಸೀಟ್ ಮ್ಯಾಟ್ರಿಕ್ಸ್ ಕೂಡ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ನ.7ರಂದು ಬೆಳಗ್ಗೆ 11 ಗಂಟೆ ನಂತರ ವೆರಿಫಿಕೇಷನ್ ಸ್ಲಿಪ್ ಡೌನ್‍ಲೋಡ್ ಮಾಡಿಕೊಳ್ಳಬೇಕು. ನ.7ರಂದು ಮಧ್ಯಾಹ್ನ 1 ಗಂಟೆಯಿಂದ ನ.12ರಂದು ಬೆಳಗ್ಗೆ 11ಗಂಟೆವರೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಬೇಕು. ನ.12ರಂದು ಮಧ್ಯಾಹ್ನ 3ಗಂಟೆ ನಂತರ ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ನ.12ರಂದು ಸಂಜೆ 4ರಿಂದ ನ.14ರಂದು ಬೆಳಗ್ಗೆ 11ಗಂಟೆವರೆಗೆ ಇಚ್ಛೆ/ಆಯ್ಕೆಗಳನ್ನು ಬದಲಾಯಿಸಲು ಹಾಗೂ ಅಳಿಸುವುದಕ್ಕೂ ಅವಕಾಶ ನೀಡಲಾಗಿದೆ. ನ.14ರಂದು ಸಂಜೆ 4ಗಂಟೆ ನಂತರ ನೈಜ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಎಚ್.ಪ್ರಸನ್ನ ತಿಳಿಸಿದ್ದಾರೆ.

 

...

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor