×
Ad

ಕಾಂಗ್ರೆಸ್‍ನವರು ಸಂವಿಧಾನ ವಿರೋಧಿಗಳು : ಎನ್.ರವಿಕುಮಾರ್

Update: 2025-03-25 20:14 IST

ಬೆಂಗಳೂರು: ಕಾಂಗ್ರೆಸ್‍ನವರು ಸಂವಿಧಾನ ವಿರೋಧಿಗಳು. ಮುಸ್ಲಿಮರ ಓಲೈಕೆಗಾಗಿ ಸಂವಿಧಾನ ಬದಲಾವಣೆಯ ಮಾತುಗಳನ್ನಾಡುತ್ತಾರೆ ಎಂದು ವಿಧಾನ ಪರಿಷತ್ತಿನ ಸದಸ್ಯ ಎನ್.ರವಿಕುಮಾರ್ ತಿಳಿಸಿದ್ದಾರೆ.

ಮಂಗಳವಾರ ನಗರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದೇಶದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಸಂವಿಧಾನಕ್ಕೆ ಅತಿಹೆಚ್ಚು ಧಕ್ಕೆಯುಂಟಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದೇ ಕಾಂಗ್ರೆಸ್ ಎಂದರು.

ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿ ನೀಡಲು ಬರುವುದಿಲ್ಲ, ಇದನ್ನು ಬದಲಾಯಿಸುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಅಲ್ಪಸಂಖ್ಯಾತರಿಗೆ ಧರ್ಮಾಧಾರಿತ ಮೀಸಲಾತಿ ನೀಡಲು ಬಿಡುವುದಿಲ್ಲ. ಈ ಕುರಿತು ತೀವ್ರ ಹೋರಾಟ ಮಾಡುತ್ತೇವೆ ಎಂದು ಎನ್.ರವಿಕುಮಾರ್ ಖಂಡಿಸಿದರು.

ಸಂವಿಧಾನ ರಕ್ಷಣೆಯ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಈಗ ಅದರ ಬದಲಾವಣೆಯ ಮಾತುಗಳನ್ನಾಡುತ್ತಿರುವುದು ನಿಜಕ್ಕೂ ನಾಚಿಕೆಗೇಡು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ದಿನಕ್ಕೊಂದು ಅವಾಂತರಗಳನ್ನು ಜನರು ನೋಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇವರಿಗೆ ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದು ಎನ್.ರವಿಕುಮಾರ್ ತಿಳಿಸಿದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News