×
Ad

ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಆರೋಪ; ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದ್ದೇನು?

Update: 2026-01-07 20:36 IST

ಬೆಂಗಳೂರು  ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ನಾನು ಎಸ್‍ಪಿ ಜೊತೆ ಮಾತನಾಡಿದ್ದೇನೆ. ಈ ಪ್ರಕರಣದಲ್ಲಿ ಕಾನೂನಿನಂತೆ ಕ್ರಮ ಜರುಗುತ್ತದೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ಮಹಿಳೆಯ ಮೇಲೆ ಬಿಎನ್‍ಎಸ್ 307 ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಮಹಿಳೆಯನ್ನು ಬಂಧಿಸಿದ ಮೇಲೆ ಆಕೆಯೇ ಬಟ್ಟೆ ಬಿಚ್ಚಿಕೊಂಡಿದ್ದಾರೆ. ಬಟ್ಟೆ ಬಿಚ್ಚಿದ್ದನ್ನು ಆಕೆಯ ತಮ್ಮನೇ ವೀಡಿಯೋ ಮಾಡಿ ವೈರಲ್ ಮಾಡಿದ್ದಾನೆ. ಹೀಗಾಗಿ ಕಾನೂನಿನ ಪ್ರಕಾರ ಏನು ಕ್ರಮ ಆಗಬೇಕೋ, ಅದು ಆಗುತ್ತದೆ ಎಂದು ಹೇಳಿದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News